ನ್ಯೂಯಾರ್ಕ್‌ನ ಸುರಂಗಮಾರ್ಗದಲ್ಲಿ ಶೂಟೌಟ್: ಐವರಿಗೆ ಗುಂಡೇಟು, ಹಲವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗಮಾರ್ಗ ನಿಲ್ದಾಣದಲ್ಲಿ ಇಂದು ಶೂಟೌಟ್ ನಡೆದಿದ್ದುಕನಿಷ್ಠ ಐವರಿಗೆ ಗುಂಡೇಟು ತಗುಲಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿರುವಂತೆ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸನ್‌ಸೆಟ್ ಪಾರ್ಕ್‌ನ 36 ನೇ ಸ್ಟ್ರೀಟ್ ನ ಸುರಂಗಮಾರ್ಗ ನಿಲ್ದಾಣದಲ್ಲಿ ಅನೇಕ ಜನರು ಗುಂಡು ಹಾರಿಸಿದ್ದು, ಈ ಶೂಟೌಟ್ ನಲ್ಲಿ ಕನಿಷ್ಠ ಐವರಿಗೆ ಗುಂಡೇಟು ತಗುಲಿದೆ ಎಂದು ಮಾಹಿತಿ ನೀಡಿದೆ.
ಮಂಗಳವಾರ ಬೆಳಿಗ್ಗೆ ನಿಲ್ದಾಣದಲ್ಲಿ ಅತೀ ಹೆಚ್ಚು ಪ್ರಯಾಣಿಕರಿದ್ದ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದ ವ್ಯಕ್ತಿ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾನೆ. ಈ ವೇಳೆ ಪ್ರಯಾಣಿಕರಿಗೆ ಗುಂಡೇಟು ತಗುಲಿದೆ ಎನ್ನಲಾಗಿದೆ.
ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ನ್ಯೂಯಾರ್ಕ್ ಪೊಲೀಸರು ನಿಲ್ದಾಣವನ್ನು ವಶಕ್ಕೆ ಪಡೆದಿದ್ದು, ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ತರುವ ಕಾರ್ಯಾಚರಣೆ ನಡೆಸಿದ್ದಾರೆ. ನಿಲ್ದಾಣದ ಲೈನ್ ನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ಸುರಂಗ ಮಾರ್ಗದಲ್ಲಿ ಸ್ಫೋಟಗೊಳ್ಳದ ಸ್ಫೋಟಕ ಡಿವೈಸ್ ಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಬರುವ ಇತರೆ ನಿಲ್ದಾಣಗಳನ್ನು ಮತ್ತು ಈ ಮಾರ್ಗದಲ್ಲಿ ಸೇರುವ ಪ್ರದೇಶಗಳಲ್ಲಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮಾಹಿತಿ ಪಡೆದ ಅಧ್ಯಕ್ಷ ಬೈಡನ್
ಘಟನೆ ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವೈಟ್ ಹೌಸ್ ಹಿರಿಯ ವಕ್ತಾರರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!