ಶೋಪಿಯಾನ್‌ ನಲ್ಲಿ ಎನ್‌ ಕೌಂಟರ್: ಉಗ್ರನನ್ನು ಹೊಡೆದುರುಳಿಸಿದ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಶೋಪಿಯಾನ್‌ ಜಿಲ್ಲೆಯ ಝೈನಾಪೋರಾ ಪ್ರದೇಶದಲ್ಲಿರುವ ಚೆರ್ಮಾರ್ಗ್‌ ನಲ್ಲಿ ಎನ್‌ ಕೌಂಟರ್‌ ನಡೆದಿದ್ದು, ಪೊಲೀಸರು ಹಾಗೂ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ್ನು ಹೊಡೆದುರುಳಿಸಿದ್ದಾರೆ ಎಂದರು.
ಉಗ್ರರು ನೆಲೆಯೂರಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಈ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!