ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರುಗಾಳಿ ಸಹಿತ ಮಳೆಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಕಂಬದ ವೈರ್ ಹಾಗೂ ನೂರಾರು ಮನೆಗಳ ಟಿವಿ, ಫ್ರಿಡ್ಜ್ಗಳಿಗೆ ಹಾನಿಯಾದ ಘಟನೆ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಭಾರೀ ಗಾಳಿಗೆ ವಿದ್ಯುತ್ ಕಂಬಗಳಲ್ಲಿನ ತಂತಿಗಳು ಒಂದಕ್ಕೊಂದು ತಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಇದರಿಂದ ವಿದ್ಯುತ್ ಕಂಬ ಹಾಗೂ ಗ್ರಾಮದ ಮನೆಗಳಲ್ಲಿನ ಟಿವಿ, ಫ್ರಿಡ್ಜ್, ಫ್ಯಾನ್ಗಳು ಸೇರಿದಂತೆ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಘಟನೆಯಲ್ಲಿ ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೂಡಲೇ ಜೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.