Friday, November 21, 2025

ಏರ್ ಕಂಡಿಷನರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋಧ್ರಾ ಪಟ್ಟಣದ ಮನೆಯೊಂದಕ್ಕೆ ಬೆಂಕಿ ತಗುಲಿ, ಮನೆಯಲ್ಲಿದ್ದವರು ಹೊರಬರಲು ಸಾಧ್ಯವಾಗದೆ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ.

ಶುಕ್ರವಾರ ಬೆಳ್ಳಂಬೆಳಗ್ಗೆ ಗಂಗೋತ್ರಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಆಭರಣ ವ್ಯಾಪಾರಿ ಕಮಲ್ ದೋಷಿ (50), ಅವರ ಪತ್ನಿ ದೇವಲ್ಬೆನ್ (45), ಮತ್ತು ಅವರ ಪುತ್ರರಾದ ದೇವ್ (24) ಮತ್ತು ರಾಜ್ (22) ಎಂದು ಗುರುತಿಸಲಾಗಿದೆ. ಈ ನಾಲ್ವರು ನಿದ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಎ ವಿಭಾಗದ ಪೊಲೀಸ್ ಠಾಣಾಧಿಕಾರಿ ಆರ್.ಎಂ. ವಾಸಯ್ಯ ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ನೆಲ ಮಹಡಿಯಲ್ಲಿ ಸ್ಪ್ಲಿಟ್ ಏರ್ ಕಂಡಿಷನರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿದ್ದ ಮರದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಹೊಗೆಯಿಂದಾಗಿ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!