ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್, ರೋಗಿಗಳು ಪಾರು

ಹೊಸದಿಗಂತ ವರದಿ ಪುತ್ತೂರು:

ಪುತ್ತೂರು ಉಪವಿಭಾಗ ವ್ಯಾಪ್ತಿಯ ಅತಿದೊಡ್ಡ ಆಸ್ಪತ್ರೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಭೀತಿ ಸೃಷ್ಟಿಸಿದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.

ಡಿ.22ರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ. ಪುತ್ತೂರು ವಿ.ಹಿಂ.ಪ. ಕಾರ್ಯಾಲಯದಲ್ಲಿದ್ದ ದತ್ತ ಮಾಲಾಧಾರಿಗಳು ಬಂದು ಬೆಂಕಿ ಶಮನಕ್ಕೆ ಸಹಕರಿಸಿದ್ದಾರೆ.
ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.

ರಾತ್ರಿಯೇ ಶಾಸಕರ ಭೇಟಿ

ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಮಂಗಳೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿದ್ದಾರೆ. ಸ್ಥಳದಲ್ಲಿ ಅಶೋಕ್ ರೈ ಅಭಿಮಾನಿ ಬಳಗದವರೂ ಸೇರಿಕೊಂಡು ವ್ಯವಸ್ಥೆಗಳನ್ನು ಸರಿಪಡಿಸಿದ್ದಾರೆ. ಶಾಸಕ ಅಶೋಕ್ ರೈ ಮಾರ್ಗದರ್ಶನ ನೀಡಿದ್ದಾರೆ.
ಬೆಂಕಿಯ ಶಮನದ ಬಳಿಕ ದತ್ತ ಮಾಲಾಧಾರಿಗಳು ಅಸ್ಪತ್ರೆಯನ್ನು ಶುಚಿಗೊಳಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಆಶಾ ಪುತ್ತೂರಾಯ ಈ ಸಂದರ್ಭ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!