ಅಮಿತ್‌ ಶಾ ತೆರಳಬೇಕಿದ್ದ ಹಾದಿಯಲ್ಲಿ ಶಾರ್ಟ್ ಸರ್ಕ್ಯೂಟ್: ಜನರಲ್ಲಿ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರು ನಗರದ ಮೌಂಟ್ ಕಾರ್ಮೆಲ್ ಕಾಲೇಜು ಮುಂಭಾಗದ ರಸ್ತೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕಾಲ ಆತಂಕಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್‌ಪಂತ್ ಸ್ಪಷ್ಪಪಡಿಸಿದ್ದಾರೆ.
ಹೆಚ್ ಎಎಲ್‌ ವಿಮಾನ ನಿಲ್ದಾಣದಿಂದ‌ ಪ್ಯಾಲೇಸ್ ರಸ್ತೆಯಲ್ಲಿ ಅಮಿತ್​ ಶಾ ಅವರು ಆಗಮಿಸುತ್ತಿದ್ದರು. ಇದೇ ವೇಳೆ ಮೌಂಟ್ ಕಾರ್ಮೆಲ್ ಕಾಲೇಜು ಬಳಿ ಈ ಅವಾಂತರ ನಡೆದಿದೆ‌.
ಕೆಳಗೆ ಬಿದ್ದಿದ್ದ ಎಲೆಕ್ಟ್ರಿಕಲ್ ವೈರ್ ಮೇಲೆ‌ ಕಾರು ಹಾದುಹೋದ ನಂತರ ಈ ದುರಂತ ಸಂಭವಿಸಿದೆ. ವೈರ್​ನಲ್ಲಿ ಬೆಂಕಿ ಕಾಣಿಸಿಕೊಂಡು ಶಬ್ಧದ ಜೊತೆ ಭಾರಿ ಹೊಗೆ ಕಾಣಿಸಿಕೊಂಡಿದೆ.
ಈ ಬಗ್ಗೆ‌ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರು, ಶಾರ್ಟ್​ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕಲ್ ವೈರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಬಂದಿದೆ. ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದು ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!