ಪಾನಮತ್ತ ವ್ಯಕ್ತಿಯಿಂದ ಗುಂಡಿನ ದಾಳಿ: ಇಬ್ಬರಿಗೆ ಗಾಯ

ಹೊಸದಿಗಂತ ವರದಿ, ಕೊಡಗು:
ಪಾನಮತ್ತ ವ್ಯಕ್ತಿಯೊಬ್ಬರು ಇಬ್ಬರ ಮೇಲೆ ಗುಂಡು ಹಾರಿಸಿರುವ ಪ್ರಕರಣ ವೀರಾಜಪೇಟೆ ಸಮೀಪದ ಬಾಳುಗೋಡು ಗ್ರಾಮದಲ್ಲಿ ನಡೆದಿದೆ.
ವೀರಾಜಪೇಟೆಯ ಪೆರುಂಬಾಡಿ ಸಮೀಪದ ಬಾಳುಗೋಡು ನಿವಾಸಿ ವಿನಯ್ ಅಯ್ಯಪ್ಪ ಎಂಬವರೇ ಗುಂಡು ಹಾರಿಸಿದ‌ವರಾಗಿದ್ದು, ಗ್ರಾಮದ ನಿವಾಸಿಗಳಾದ ಹರೀಶ್ ಹಾಗೂ ಬಾಲಕೃಷ್ಣ ಗಾಯಗೊಂಡವರಾಗಿದ್ದಾರೆ.
ವೀರಾಜಪೇಟೆ ಠಾಣಾಧಿಕಾರಿ ಜಗದೀಶ ಧೂಳಶೆಟ್ಟಿ ಅವರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಪಿಸ್ತೂಲು ವಶಪಡಿಸಿಕೊಂಡಿದ್ದಾರೆ.
ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ‌ ನಡುವೆ ಘಟನೆಯ ಬಗ್ಗೆ ಮಾಹಿತಿ ನೀಡಿರುವ ಗ್ರಾಮಸ್ಥರು, ಹರೀಶ ಹಾಗೂ ಬಾಲಕೃಷ್ಣ ಅವರುಗಳು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಿನಯ್ ಅವರು ತಮ್ಮ ಬಳಿ ಇದ್ದ ಪಿಸ್ತೂಲ್’ನಿಂದ ಗುಂಡು ಹಾರಿಸಿದ್ದಾರೆ. ಗಾಯಾಳುಗಳ ವಿರುದ್ಧ ಈಗಾಗಲೇ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿದ್ದು,‌ಅವರಿಬ್ಬರ ವಿರುದ್ಧ ರೌಡಿಶೀಟ್ ತೆರೆಯಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!