Friday, September 30, 2022

Latest Posts

ಕೊಡಗಿನಲ್ಲಿ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟ ಎಸೆತ: ಸಂಪೂರ್ಣ ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದರು. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳ ನಾಯಕರು ತೀವ್ರ ವಾಗ್ಧಾಳಿ ನಡೆಸಿದ್ದಬೆನ್ನಲ್ಲೇ ಸಿಎಂ ಬೊಮ್ಮಾಯಿ, ಮೊಟ್ಟೆ ಎಸೆದ ವಿಚಾರವನ್ನು ಸಂಪೂರ್ಣವಾಗಿ ತನಿಖೆ ನಡೆಸೋದಕ್ಕೆ ಆದೇಶಿಸಿದ್ದಾರೆ.
ಈ ಕುರಿತಂತೆ ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು , ಸಿದ್ದರಾಮಯ್ಯ ಜೊತೆಗೆ ಮಾತನಾಡಿದ್ದೇನೆ. ಅವರಿಗೆ ಜೀವಭಯ, ಬೆದರಿಕೆ ಇರೋ ಬಗ್ಗೆಯೂ ಮಾತನಾಡಿ ಭರವಸೆ ನೀಡಿದ್ದೇನೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದೇನೆ ಎಂದರು.
ಈ ವಿಚಾರವಾಗಿ ಡಿಜಿಯವರನ್ನು ಕರೆದು ಮಾತನಾಡುತ್ತೇನೆ. ಇವತ್ತು ಈ ವಿಚಾರದಲ್ಲಿ ಕಾನೂನನ್ನು ಸುವ್ಯವಸ್ಥೆಯನ್ನು ಯಾರೂ ಕೈಗೊಳ್ಳದಂತೆ ಎಲ್ಲಾ ಎಸ್ಪಿಗಳಿಗೆ ಸೂಚನೆ ನೀಡುವಂತೆ ತಿಳಿಸಿದ್ದೇನೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ಧಾಕ್ಷ್ಯಣ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದೇನೆ ಎಂದರು.
ಯಾರೂ ಇನ್ನೊಬ್ಬರ ಮನಸ್ಥಿತಿಯನ್ನು ಪ್ರಚೋಧನೆ ಕೊಡುವಂತೆ ಹೇಳಿಕೆ ನೀಡಬಾರದು. ಈ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೆಚ್ಚಿನ ಭದ್ರತೆಯನ್ನು ನೀಡೋದಕ್ಕೂ ಡಿಜಿಯವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!