ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಕತ್ತಾದ ಪಾರ್ಕ್ ಸರ್ಕಸ್ ಪ್ರದೇಶದಲ್ಲಿರುವ ಬಾಂಗ್ಲಾದೇಶದ ಹೈಕಮಿಷನ್ ಬಳಿ ಗುಂಡಿನ ದಾಳಿ ನಡೆದಿದ್ದು, ಪೊಲೀಸ್ ಒಬ್ಬರು ಮಹಿಳೆಯನ್ನ ಕೊಂದ ನಂತ್ರ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಸಂಚಲನವನ್ನ ಸೃಷ್ಟಿಸಿದ್ದು, ಗುಂಡಿನ ದಾಳಿಯಲ್ಲಿ ಬೈಕ್ ಚಾಲಕನಿಗೆ ಸಹ ಗುಂಡು ತಗುಲಿದೆ.
ಯಾವ ಕಾರಣದಿಂದ ಪೊಲೀಸ್ ಗುಂಡಿನ ದಾಳಿ ನಡೆಸಿದ್ದಾನೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಬಾಂಗ್ಲಾದೇಶ್ ಹೈಕಮಿಷನ್ ಕಚೇರಿಯ ಹೊರಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಸಿಬ್ಬಂದಿ ಕನಿಷ್ಠ ಹತ್ತು ಸುತ್ತುಗಳ ಗುಂಡು ಹಾರಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.