ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಸೇನೆ (ಯುಬಿಟಿ) ನಾಯಕ ವಿನೋದ್ ಘೋಸಾಲ್ಕರ್ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್ ಅವರ ಮೇಲೆ ಮುಂಬೈನ ದಹಿಸರ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಒಟ್ಟು ಮೂರು ಗುಂಡುಗಳನ್ನು ಹಾರಿಸಲಾಗಿದೆ.
ಮಾಜಿ ಕಾರ್ಪೊರೇಟರ್ ಅಭಿಷೇಕ್ ಘೋಸಾಲ್ಕರ್ ಅವರನ್ನು ಈ ಪ್ರದೇಶದ ಕರುಣಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.