ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 21ನೇ ಪದಕ ಲಭ್ಯವಾಗಿದೆ.
ಶಾಟ್ ಪುಟ್ ಪ್ಲೇಯರ್ ಸಚಿನ್ ಭಾರತಕ್ಕೆ ಎಂಟನೇ ಬೆಳ್ಳಿ ಪದಕವನ್ನು ತಂದುಕೊಟ್ಟಿದ್ದಾರೆ. ಕ್ರೀಡಾಕೂಟದ ಏಳನೇ ದಿನ ಪುರುಷರ ಶಾಟ್ಪುಟ್ ಎಫ್46 ವಿಭಾಗದಲ್ಲಿ ಭಾರತದ ಸಚಿನ್ ಸರ್ಜೆರಾವ್ ಖಿಲಾರಿ ತನ್ನ ಎರಡನೇ ಪ್ರಯತ್ನದಲ್ಲಿ 16.32 ಮೀಟರ್ ದೂರ ಶಾಟ್ಪುಟ್ ಎಸೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಒಟ್ಟು 21 ಪದಕಗಳನ್ನು ತನ್ನದಾಗಿಸಿಕೊಂಡಿದೆ.