ಅಧಿಕಾರಿಗಳ ತಪ್ಪಿಗೆ ಸಿಎಂ ಯಾಕ್ರೀ ರಾಜೀನಾಮೆ ಕೊಡ್ಬೇಕು? ಡಿಸಿಎಂ ಪ್ರಶ್ನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್, ಇದಕ್ಕೆ ಸಿದ್ದರಾಮಯ್ಯನವರು ಏಕೆ ರಾಜೀನಾಮೆ ಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ಧಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಹಗರಣಕ್ಕೂ ಸಿದ್ದರಾಮಯ್ಯನವರಿಗೂ ಏನು ಸಂಬಂಧ?. ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಹೇಗೆ ಜವಾಬ್ದಾರರಾಗುತ್ತಾರೆ?. ಬ್ಯಾಂಕ್​ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಹೇಳಿದರು.

ಪ್ರತಿಪಕ್ಷಗಳಿಗೆ ಸದನದ ಕಲಾಪಗಳ ನಡಾವಳಿಗಳ ಕುರಿತು ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು, ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!