ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಉಡಾನ್ ಯೋಜನೆಗೆ ಯಶಸ್ವಿಯಾದ ಹಿನ್ನೆಲೆ 120 ಸ್ಥಳಗಳಿಗೆ ಹೆಚ್ಚುವರಿ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಇದರಿಂದಾಗಿ ಮುಂದಿನ ಹತ್ತು ವರ್ಷದಲ್ಲಿ ನಾಲ್ಕು ಕೋಟಿ ಜನರಿಗೆ ಅನುಕೂಲವಾಗಲಿದೆ.
ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ಆರಂಭವಾಗುತ್ತದೆ ಎಂದಿದ್ದಾರೆ.