ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರನ್ನು ಸ್ವೀಕರಿಸಬೇಕೋ ಬೇಡವೋ? ಇಂದು ಆದೇಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ನ್ಯಾಯಾಲಯದ ಈ ಆದೇಶ ಆಧರಿಸಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಎಂಬುದು ಗೊತ್ತಾಗಲಿದೆ. ಕೋರ್ಟ್‌ ನೀಡುವ ಆದೇಶ ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರನ್ನು ಅಭಿಯೋಜನೆಗೆ ಅನುಮತಿ ಪರಿಗಣಿಸಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆಯಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!