ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂದು ಹೇಳಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಅವರು ಯಾವ ಅರ್ಥದಲ್ಲಿ ಸೇನೆಯನ್ನು ಕರೆಸಬೇಕು ಎಂದು ಹೇಳಿದ್ದಾರೋ ಗೊತ್ತಿಲ್ಲ ಎಂದು ಚುಚ್ಚಿದರು.
ಪಾಪ.. ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ, ಮಿಲಿಟರಿ ತರಬೇಕು ಎಂದು. ಅವರು ಮಿಲಿಟರಿಯನ್ನು ಏಕೆ ತರಲು ಹೇಳಿದ್ದಾರೆ ಎಂದರೆ ಈ ರಾಜ್ಯದಲ್ಲಿ ಅವ್ಯಾಹತವಾಗಿ ಲೂಟಿ, ದರೋಡೆ ನಡೆಯುತ್ತಿದೆ. ಭಯೋತ್ಪಾದಕ ಕೃತ್ಯಗಳಿಗಿಂತ ದರೋಡೆ, ಲೂಟಿ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿಯನ್ನು ಕರೆ ತರಲು ಹೇಳಿರಬೇಕು ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.
ನಾನು ಡಿಫ್ರೆಷನ್‌ನಲ್ಲಿ ಇದ್ದೀನಿ ಎಂದು ಅವರು ಹೇಳಿದ್ದಾರೆ. ನನ್ನನ್ನು ನೋಡಿದರೆ ಡಿಫ್ರೆಷನ್‌ನಲ್ಲಿ ಇರುವವನ ರೀತಿ ಕಾಣುತ್ತೇನೆಯೇ ಎಂದ ಅವರು, ಮಿಲಿಟರಿ ತರಲು ಅವರು ಏಕೆ ಹೇಳಿದರು ಎಂದು ನಾನು ಯೋಚನೆ ಮಾಡುತ್ತಿದ್ದೇನೆ ಎಂದು ಟಾಂಗ್ ಕೊಟ್ಟರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜುನಾಥ್, ಹೆಚ್.ಕೆ.ಸುರೇಶ್ ಮುಂತಾದವರು ಹಾಜರಿದ್ದರು.