ಲೂಟಿಕೋರರ ಕೈಗೆ ಸರ್ಕಾರವನ್ನು ಕೊಡಬೇಕಾ? : ಜನತೆಗೆ ಪ್ರಧಾನಿ ಮೋದಿ ಪ್ರಶ್ನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್‌ ಸರ್ಕಾರದಲ್ಲಿ ಬರೀ ಲೂಟಿಕೋರರೇ ಇದ್ದಾರೆ. ಇಂಥವರ ಕೈಗೆ ಅಧಿಕಾರ ಕೊಡಬೇಕಾ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಲೂಟಿಕೋರ ಸರ್ಕಾರ, ಈ ಸರ್ಕಾರದ ಕೈಗೆ ಇಂಥಾ ದೊಡ್ಡ ದೇಶವನ್ನು ಕೊಡಬೇಕೆ? ಎಂದು ಜನರನ್ನು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ನಿರ್ವಹಿಸುತ್ತಿಲ್ಲ ವಸೂಲಿ ಗ್ಯಾಂಗ್​ನ್ನು ನಡೆಸುತ್ತಿದೆ. ಕಾಂಗ್ರೆಸ್​ ಪಕ್ಷವು ಕರ್ನಾಟಕವನ್ನು ಲೂಟಿ ಮಾಡುವ ಎಟಿಎಂ ಮಾಡಿಕೊಂಡಿದ್ದು, ಕಡಿಮೆ ಸಮಯದಲ್ಲಿ ಸರ್ಕಾರದ ಖಜಾನೆ ಖಾಲಿ ಮಾಡಿದ್ದಾರೆ. ಮುಂದೊಂದು ದಿನ ಸರ್ಕಾರಕ್ಕೆ ತನ್ನ ನೌಕರರಿಗೆ ಸಂಬಳ ಕೊಡಲೂ ಹಣವಿರುವುದಿಲ್ಲ, ಜತೆಗೆ ನಿಮ್ಮ ಮಕ್ಕಳನ್ನೂ ಹಸಿವಿನಿಂದ ನರಳುವಂತೆ ಮಾಡುವುದರಲ್ಲಿ ಸಂಶಯವಿಲ್ಲ, ಕಾಂಗ್ರೆಸ್​ ಮೊದಲೇ ಪ್ಲ್ಯಾನ್​ ಮಾಡಿ ವಸೂಲಿ ಮಾಡಿ ಸರ್ಕಾರದ ಖಜಾನೆಯಿಂದ ತನ್ನ ತಿಜೋರಿಯನ್ನು ತುಂಬಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!