ಟಿಪ್ಪು ಹೋರಾಟಗಾರ ಅಂತಾರಲ್ಲ ನಾಚಿಕೆ ಆಗಲ್ವ?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ವಿಮಾನ ನಿಲ್ದಾಣಕ್ಕೆ (Mysuru Airport) ಟಿಪ್ಪು ಸುಲ್ತಾನ್‌ ಹೆಸರು ನಾಮಕಾರಣ ಮಾಡುವಂತೆ ಕಾಂಗ್ರೆಸ್ ಶಾಸಕರು ಒತ್ತಾಯಿಸುತ್ತಿದ್ದು, ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಪ್ಪು (Tipu Sultan) ಒಬ್ಬ ಮತಾಂಧ, ಮಂಡ್ಯದಲ್ಲಿ ಅವನ ಚರಿತ್ರೆ ಇದೆ. ಕೊಡಗಿನಲ್ಲಿ ಹಿಂದೂಗಳ ಹತ್ಯೆ ಮಾಡಿದ್ದ ಚರಿತ್ರೆ ಇದೆ. ಮೇಲುಕೋಟೆಯಲ್ಲಿ ಬ್ರಾಹ್ಮಣರನ್ನ ಕಟ್ಟಾಕಿ ಕತ್ತರಿಸಿ ಹಾಕಿದ್ದ ಎಲ್ಲಾ ಇತಿಹಾಸವಿದೆ. ಟಿಪ್ಪು ಸ್ವತಂತ್ರ ಹೋರಾಟಗಾರ ಅಲ್ಲ. ಆಗ ಮೈಸೂರು ಆಡಳಿತ ನಡೆಸುತ್ತಿದ್ದವರು ಒಡೆಯರ್ ವಂಶಸ್ಥರು. ಹೈದರಾಲಿ ಚಾಕ್ರಿ, ಕೂಲಿಗೆ ಬಂದು ಒಡೆಯರ್‌ಗೆ ಮೋಸ ಮಾಡಿ ಸಿಂಹಾಸನ ಏರೋಕೆ ಬಂದಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪು ಸುಲ್ತಾನ್‌ನನ್ನ ಹೋರಾಟಗಾರ ಅಂತಾರಲ್ಲ ನಾಚಿಕೆ ಆಗಲ್ವ? ಟಿಪ್ಪು, ಹೈದರಾಲಿ ಡ್ಯಾಂ ಕಟ್ಟಿಸಿದ್ರಾ? ಒಂದು ಕೆರೆನಾದ್ರೂ ಕಟ್ಟಿಸಿದ್ರಾ? ಆಸ್ಪತ್ರೆ, ಶಿಕ್ಷಣ ಸಂಸ್ಥೆ ಕಟ್ಟಿಸಿದ್ರಾ? ಎಲ್ಲವನ್ನು ಕಟ್ಟಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ವೋಟಿಗೋಸ್ಕರ ಕಾಂಗ್ರೆಸ್‌ನವರು ಹೋರಾಟಗಾರ ಅಂತಾರೆ. ವೋಟಿಗೋಸ್ಕರ ಎಂತಹ‌ ಕೀಳು ಮಟ್ಟಕ್ಕೆ ಕಾಂಗ್ರೆಸ್‌ನವರು ಹೋಗ್ತಾರೆ. ಕಾಂಗ್ರೆಸ್ ಟಿಪ್ಪು ಸಿದ್ಧಾಂತದ ಮೇಲೆ ಬಂದಿದ್ದಾರೆ, ನಾವೂ ಹಿಂದುತ್ವದ ಸಿದ್ಧಾಂತದ ಮೇಲೆ ಬಂದಿದ್ದೇವೆ. ಜನರು ಅದರ ಬಗ್ಗೆ ಮುಂದೆ ತೀರ್ಮಾನ ಮಾಡ್ತಾರೆ ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!