ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದ ಮೂರನೇ ಹಂತದ ಯೋಜನೆ ಕಿತ್ತಳೆ ಮಾರ್ಗಕ್ಕಾಗಿ 6500 ಮರಗಳನ್ನು ಕಟ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಮುಂದಾಗಿದೆ. ಈ ಹಿಂದೆ ಇದೇ ಕಾಮಗಾರಿಗಾಗಿ 11 ಸಾವಿರ ಮರಗಳನ್ನು ಕಟ್ ಮಾಡಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸಿತ್ತು. ಪರಿಸರ ಹೋರಾಟಗಾರರ ಆಕ್ರೋಶ ವ್ಯಕ್ತವಾಗಿತ್ತು.
ಸದ್ಯ ಪರಿಸರ ಹೋರಾಟಗಾರರ ಆಕ್ರೋಶದ ನಡುವೆಯೂ 6500 ಮರಗಳನ್ನು ಕಟ್ ಮಾಡಲು ನಮ್ಮ ಮೆಟ್ರೋ ಮುಂದಾಗಿದೆ. ಎರಡು ಮಾರ್ಗವನ್ನು ಹೊಂದಿರುವ ಮೂರನೇ ಹಂತವು ಜೆಪಿ ನಗರದಿಂದ ಕೆಂಪಾಪುರ ಮತ್ತು ಹೊಸಹಳ್ಳಿಯಿಂದ ಕಡಬಗೆರೆಗೆ ಎರಡು ಎತ್ತರದ ಕಾರಿಡಾರ್‌ಗಳನ್ನು ಒಳಗೊಂಡಿದೆ. 15,611 ಸಾವಿರ ಕೋಟಿ ರೂ ವೆಚ್ಚದಲ್ಲಿ ಕಿತ್ತಳೆ ಮಾರ್ಗದ ಕಾಮಗಾರಿ ನಡೆಯಲಿದೆ.