ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಷದ ಸಂಘಟನೆಗಳಲ್ಲಿ ಆಸಕ್ತಿ ತೋರದ ಹಾಗೂ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ ಯಶ್ವಂತ್ ಸಿನ್ಹಾ ಪುತ್ರ, ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಜಾರ್ಖಂಡ್‌ನ ಹಜಾರಿಬಾಗ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮನೀಶ್ ಜೈಸ್ವಾಲ್ ಅವರನ್ನು ಪಕ್ಷ ಘೋಷಣೆ ಮಾಡಿತ್ತು. ಈ ಮೂಲಕ ಲೋಕಸಭಾ ಚುನಾವಣೆಗೆ ಸಿನ್ಹಾ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿತು. ಅಂದಿನಿಂದ ಜಯಂತ್ ಸಿನ್ಹಾ ಅವರು ಸಂಘಟನಾ ಕಾರ್ಯ ಮತ್ತು ಪ್ರಚಾರದಲ್ಲಿ ಆಸಕ್ತಿ ತೋರುತ್ತಿರಲಿಲ್ಲ. ಅಲ್ಲದೇ ಪಕ್ಷದ ಅಧಿಕೃತ ಅಭ್ಯರ್ಥಿ ಪರ ಕೆಲಸ ಮಾಡದ ಆರೋಪ ಹಾಗೂ ಈ ಬಾರಿ ಮತದಾನವನ್ನು ಕೂಡ ಮಾಡಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಸಿನ್ಹಾ ನಡೆ ಪಕ್ಷದ ಹೈಕಮಾಂಡ್ ಗಮನಕ್ಕೆ ಬಂದಿದ್ದು, ಇದೀಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ. 2 ದಿನದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದೆ.