ನೂತನ ಸಂಸತ್ ಭವನ ಉದ್ಘಾಟನೆಯಲ್ಲಿ ಭಾಗಿಯಾಗಿ ‘ಹೃದಯ ವೈಶಾಲ್ಯತೆ’ ತೋರಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

ಹೊಸ ಕಟ್ಟಡ ಭಾರತದ ಹೆಮ್ಮೆಯ ಸಂಕೇತವಾಗಿದೆ ಎಂದು ಹೇಳಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಮೇ 28 ರಂದು ‘ಐತಿಹಾಸಿಕ ಉದ್ಘಾಟನೆಯ ದಿನದಂದು ಪ್ರತಿಪಕ್ಷಗಳು ಹೃದಯ ವೈಶಾಲ್ಯತೆ ತೋರಿಸುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ನಾವೆಲ್ಲರೂ ರಾಷ್ಟ್ರಪತಿಗಳನ್ನು ಗೌರವಿಸುತ್ತೇವೆ, ಅವರ ಬಗ್ಗೆ ಕಾಂಗ್ರೆಸ್ ಹೇಳಿದ್ದನ್ನು ನೆನಪಿಸಿಕೊಳ್ಳುವ ಮೂಲಕ ರಾಷ್ಟ್ರಪತಿ ಹುದ್ದೆಯನ್ನು ಯಾವುದೇ ವಿವಾದಕ್ಕೆ ಎಳೆಯಲು ಬಯಸುವುದಿಲ್ಲ. ಆದರೆ ಭಾರತದ ಪ್ರಧಾನಿ ಕೂಡ ಸಂಸತ್ತಿನ ಪ್ರಮುಖ ಭಾಗವಾಗಿದ್ದಾರೆ. ಪ್ರಧಾನಿ ಕೂಡ ಸಾಂವಿಧಾನಿಕ ಜವಾಬ್ದಾರಿ ಹೊಂದಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕಾರ್ಯಕ್ರಮ ಬಹಿಷ್ಕಾರವನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ವೇದಿಕೆಯಾಗಿ ಬಳಸಬೇಡಿ ಎಂದು ವಿಪಕ್ಷ ನಾಯಕರನ್ನು ಒತ್ತಾಯಿಸಿದ ಪ್ರಸಾದ್, ಹಾಗೆ ಮಾಡಲು ಅವರಿಗೆ ಹೆಚ್ಚಿನ ಅವಕಾಶಗಳಿವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!