ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮೊದಲ ಮಹಿಳಾ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಜೀವನಾಧಾರಿತ ಸಿನಿಮಾ ತೆರೆಗೆ ಬರಲು ಸಿದ್ಧತೆ ನಡೆಸುತ್ತಿದ್ದಾರೆ.
ಕಲ್ಪನಾ ಚಾವ್ಲಾ ಆಗಿ ಬಾಲಿವುಡ್‌ನ ಖ್ಯಾತ ನಟಿ ಶ್ರದ್ಧಾ ಕಪೂರ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಕಲ್ಪನಾ ಚಾವ್ಲಾ ಅವರ ಜೀವನಚರಿತ್ರೆಯಲ್ಲಿ ಶ್ರದ್ಧಾ ಕಪೂರ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ನ ಖ್ಯಾತ ನಿರ್ದೇಶಕ ಆನಂದ್ ಎಲ್ ರೈ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕಲ್ಪನಾ ಚಾವ್ಲಾ ಅನ್‌ಟೋಲ್ಡ್ ಸ್ಟೋರಿ ಎಂದು ಟೈಟಲ್ ಇದೆ. ಇನ್ನೂ ವಿಶೇಷ ಎಂದರೆ ಬಾಲಿವುಡ್ ಸ್ಟಾರ್‌ಗಳಾದ ಆಮೀರ್ ಕಾನ್ ಮತ್ತು ಅಭಿಷೇಕ್ ಬಚ್ಚನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಈ ಸುದ್ದಿಗೆ ಪುಷ್ಠಿ ನೀಡುವಂತೆ ಶ್ರದ್ಧಾ ಇತ್ತೀಚೆಗೆ ಕೂದಲಿಗೆ ಕತ್ತರಿ ಹಾಕಿ ತನ್ನ ಲುಕ್ ಬದಲಾಯಿಸಿಕೊಂಡಿದ್ದಾರೆ. ಕಲ್ಪನಾ ಚಾವ್ಲಾ ಹಾಗೆ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಅನುಮಾನ ದಟ್ಟವಾಗಿದೆ.