Friday, March 31, 2023

Latest Posts

ಶ್ರದ್ಧಾ ಮರ್ಡರ್‌ ರೀತಿಯಲ್ಲೇ ಮತ್ತೊಂದು ಕೊಲೆ: ಢಾಬಾದ ಫ್ರಿಡ್ಜ್‌ನಲ್ಲಿ ಬಾಲಕಿಯ ಶವ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಕಿಯನ್ನು ಕೊಲೆ ಮಾಡಿ, ಶವವನ್ನು ಫ್ರಿಡ್ಜ್ ನಲ್ಲಿಟ್ಟಿದ್ದ ಆರೋಪದ ಮೇಲೆ ಮಂಗಳವಾರ ದೆಹಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಶ್ರದ್ಧಾ ಮರ್ಡರ್‌ ಮಾದರಿಯ ಮತ್ತೊಂದು ಕೊಲೆ ಪ್ರಕರಣ ಬಯಲಿಗೆ ಬಂದಿದ್ದು, ಈ ಘಟನೆ ಮತ್ತೊಮ್ಮೆ ಇಡೀ ದೆಹಲಿಯನ್ನು ಬೆಚ್ಚಿಬೀಳಿಸಿದೆ.

ಮಾಹಿತಿಯ ಪ್ರಕಾರ, ಕಾಶ್ಮೀರ ಗೇಟ್ ಐಎಸ್‌ಬಿಟಿ ಬಳಿ ಕಾರಿನಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಇದಾದ ನಂತರ ಆರೋಪಿಯು ಮೃತ ದೇಹವನ್ನು ಮಿತ್ರೌ ಗ್ರಾಮದ ತನ್ನ ಧಾಬಾದ ಫ್ರೀಜರ್‌ನಲ್ಲಿ ಬಚ್ಚಿಟ್ಟಿದ್ದಾನೆ.

ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!