ಹೊಸದಿಗಂತ ಡಿಜಿಟಲ್ ಡೆಸ್ಕ್
ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪುನಾವಾಲಾಗೆ ಮರಣದಂಡನೆ ವಿಧಿಸಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಒತ್ತಾಯಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಗಟುಕನೊಬ್ಬ ತನ್ನ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯ ನಂತರ ಆಕೆಯ ದೇಹವನ್ನು ಕಳೆದ ಆರು ತಿಂಗಳಿನಿಂದ ಪೊಲೀಸರು ಪ್ರಕರಣದ ತನಿಖೆ ನಡೆಸಿ, ಕೊನೆಗೂ ವಿಕೃತ ಪ್ರೇಮಿಯನ್ನು ಸೆರೆಹಿಡಿದಿದ್ದಾರೆ. ಇಂತಹ ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು, ಇಂತಹ ಹೀನ ಕೃತ್ಯ ಮಾಡುವವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.