ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಾಕೇತ್ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯವು ಮಂಗಳವಾರ ಶ್ರದ್ಧಾ ಕೊಲೆ ಪ್ರಕರಣವನ್ನು ವಿಚಾರಣೆಗಾಗಿ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಅಪರಾಧವನ್ನು ಸೆಷನ್ಸ್ ನ್ಯಾಯಾಧೀಶರು ವಿಚಾರಣೆಗೆ ಒಳಪಡಿಸಿರುವುದರಿಂದ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಮಂಗಳವಾರ ಹೇಳಿದ್ದಾರೆ.
ಅದರ ಅನುಸಾರ ಆರೋಪಿಯನ್ನು ಫೆಬ್ರವರಿ 24,2023 ರಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ತಿಳಿಸಿದರು.