ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಡ್ನಿ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಭಾರತ ಕ್ರಿಕೆಟ್ ತಂಡದ ಉಪ ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡು ಮೈದಾನದಿಂದ ಹೊರನಡೆಡಿದ್ದು, ಇದೀಗ ಅವರ ಆರೋಗ್ಯದ ಕುರಿತು ಬಿಸಿಸಿಐ ಮಾಹಿತಿಯನ್ನು ನೀಡಿದೆ.
ಹರ್ಷಿತ್ ರಾಣಾ ಅವರ ಓವರ್‌ನ ನಾಲ್ಕನೇ ಎಸೆತದಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅಲೆಕ್ಸ್ ಕೇರಿ ಅವರ ಕ್ಯಾಚ್ ಪಡೆಯುವ ಸಲುವಾಗಿ ಶ್ರೇಯಸ್ ಅಯ್ಯರ್ ಅದ್ಭುತ ಪ್ರಯತ್ನವನ್ನು ನಡೆಸಿ ಯಶಸ್ವಿಯಾಗಿದ್ದರು. ಈ ವೇಳೆ ಅವರು ಎಡ ಭಾಗಕ್ಕೆ ಜಾರಿಬಿದ್ದರು ಹಾಗೂ ತಮ್ಮ ಪಕ್ಕೆಲುಬುಗಳನ್ನು ಹಿಡಿದು ನೋವಿನಿಂದ ನರಳುತ್ತಿದ್ದರು. ಈ ಮಧ್ಯೆ, ತಂಡದ ಫಿಸಿಯೊ ಮೈದಾನಕ್ಕೆ ಆಗಮಿಸಿದರು ಮತ್ತು ಗಾಯವನ್ನು ಪರೀಕ್ಷಿಸಿದ ನಂತರ, ಅಯ್ಯರ್ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ದರು.
ಇದೀಗ ಬಲಗೈ ಬ್ಯಾಟ್ಸ್‌ಮನ್‌ನ ಗಾಯದ ಬಗ್ಗೆ ಬಿಸಿಸಿಐ ಮಾಹಿತಿಯನ್ನು ನೀಡಿದೆ. ಅಯ್ಯರ್ ಎಡ ಪಕ್ಕೆಲುಬಿನ ಗಾಯದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಮೌಲ್ಯಮಾಪನಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದು ಗಾಯದ ತೀವ್ರತೆಯನ್ನು ಸೂಚಿಸುತ್ತದೆ ಮತ್ತು ವಿವರವಾದ ವೈದ್ಯಕೀಯ ಮೌಲ್ಯಮಾಪನದ ಅಗತ್ಯವಿದೆ ಎಂದು ಬಿಸಿಸಿಐ ತಿಳಿಸಿದೆ. ತಂಡದ ಆಡಳಿತ ಮಂಡಳಿ ಮತ್ತು ಅಭಿಮಾನಿಗಳು ಈಗ ಅಯ್ಯರ್ ಅವರ ಚೇತರಿಕೆಗಾಗಿ ಆಶಿಸುತ್ತಿದ್ದಾರೆ.

