ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಬುಧವಾರ ಬಿಡುಗಡೆ ಮಾಡಿದ ನೂತನ ಟಿ20 ರ್ಯಾಂಕಿಂಗ್ನಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮವಾಗಿ ಆಡಿದ ಭಾರತ ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ 27 ಸ್ಥಾನ ಜಿಗಿತ ಕಂಡಿದ್ದಾರೆ.
ಶ್ರೇಯಸ್ ಅಯ್ಯರ್ ಶ್ರೀಲಂಕಾ ವಿರುದ್ಧ ಅಜೇಯರಾಗಿ 57, 74 ಮತ್ತು 73 ರನ್ಗಳಿಸಿ ಸರಣಿಯನ್ನು 3-0ಯಲ್ಲಿ ಗೆಲ್ಲುವುದಕ್ಕೆ ನೆರವಾಗಿದ್ದರು.
ವಿರಾಟ್ ಕೊಹ್ಲಿ ಅಗ್ರ 10 ಸ್ಥಾನಗಳಿಂದ ಹೊರಬಿದ್ದಿದ್ದು,15 ಸ್ಥಾನದಲ್ಲಿದ್ದಾರೆ. ಇನ್ನು ಕನ್ನಡಿಗ ಕೆ.ಎಲ್.ರಾಹುಲ್ ಟಾಪ್ 10 ರಲ್ಲಿರುವ ಏಕೈಕ ಬ್ಯಾಟ್ಸಮನ್ ಆಗಿದ್ದು, 10 ನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 13ನೇ ಸ್ಥಾನದಲ್ಲಿದ್ದಾರೆ.
ಪಾಕಿಸ್ತಾನದ ಆರಂಭಿಕರಾದ ಬಾಬರ್ ಅಜಮ್ (805) ಮತ್ತು ಮೊಹಮ್ಮದ್ ರಿಜ್ವಾನ್ (798) ಅಗ್ರ 2 ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ಭುವನೇಶ್ವರ್ ಕುಮಾರ್ 3 ಸ್ಥಾನ ಮೇಲೇರಿ 17ರಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ತಬ್ರೈಜ್ ಶಮ್ಸಿ ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ.