ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೇಯಸ್ ಅಯ್ಯರ್ ಅವರ ಅಬ್ಬರದ ಬ್ಯಾಟಿಂಗ್ ನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ 243 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಆ ಮೂಲಕ ಗುಜರಾತ್ ಟೈಟಾನ್ಸ್ ಗೆ 244 ರನ್ಗಳ ಗುರಿ ನೀಡಿದೆ .
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಪಂಜಾಬ್ ಗೆ ಉತ್ತಮ ಆರಂಭ ಸಿಕ್ಕಿತು. ಪ್ರಿಯಾಂಶ್ ಆರ್ಯ 47 ರನ್ ಗಳಿಸಿದರು.
ಮೊದಲ ವಿಕೆಟ್ ಪ್ರಭ್ಸಿಮ್ರಾನ್ ಸಿಂಗ್ ಔಟಾದ ಬಳಿಕ ಕ್ರಿಸ್ ಗೆ ಬಂದ ನಾಯಕ ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಶ್ರೇಯಸ್ ಅಯ್ಯರ್ ಕೇವಲ 42 ಎಸೆತಗಳಲ್ಲಿ 9 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದರು. ಆದರೆ ಕೇವಲ 3 ರನ್ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.
ಕೊನೆಯ ಓವರ್ ನಲ್ಲಿ ಅಯ್ಯರ್ ಗೆ ಶತಕ ಸಿಡಿಸುವ ಅವಕಾಶ ವಿತ್ತಾದರೂ ಅಯ್ಯರ್ ಮತ್ತೊಂದು ಬದಿಯಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದ ಶಶಾಂಕ್ ಸಿಂಗ್ ಗೆ ಅವಕಾಶ ನೀಡಿ ತಂಡದ ಮೊತ್ತ ಹೆಚ್ಚಳಕ್ಕೆ ನೆರವಾದರು.
ಒಂದೆಡೆ ಅಯ್ಯರ್ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದರೆ , ಮತ್ತೊಂದೆಡೆ ವಿಕೆಟ್ ಬೀಳುತ್ತಿತ್ತು. ಅಜ್ಮತುಲ್ಲಾ ಒಮರ್ಜಾಯ್ 16 ರನ್, ಗ್ಲೆನ್ ಮ್ಯಾಕ್ಸ್ವೆಲ್ ಶೂನ್ಯಕ್ಕೆ ಔಟಾದರು.
ಮಾರ್ಕಸ್ ಸ್ಟೊಯಿನಿಸ್ ಅಯ್ಯರ್ ಜೊತೆ ಅಲ್ಪ ಜೊತೆಯಾಟ ನೀಡಿದರು. ಬಳಿಕ ಬಂದ ಶಶಾಂಕ್ ಸಿಂಗ್ ಭರ್ಜರಿ ಬ್ಯಾಟಿಂಗ್ ಮಾಡಿ ಅಜೇಯ 44 ರನ್ ಗಳಿಸಿದರು.
ಕೊನೆಯ ಓವರ್ ನಲ್ಲಿ ಶಶಾಂಕ್ ಸಿಂಗ್ ಭರ್ಜರಿ ಬ್ಯಾಟಿಂಗ್ ಮಾಡಿ 5 ಬೌಂಡರಿ ಸಹಿತ ಬರೊಬ್ಬರಿ 23 ರನ್ ಸಿಡಿಸಿದರು. ಶಶಾಂಕ್ ಸಿಂಗ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದಾಗಿ ಪಂಜಾಬ್ ಕಿಂಗ್ಸ್ ಗುಜರಾತ್ ಗೆ ಗೆಲ್ಲಲು 244 ರನ್ ಗಳ ಬೃಹತ್ ಗುರಿ ನೀಡಿದೆ.