ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ತಮಿಳುನಾಡಿನ ಮೇಲ್‍ಮರವತ್ತೂರು ಶಕ್ತಿಪೀಠದ ಆಧ್ಯಾತ್ಮಿಕ ಗುರುಗಳಾದ ಶ್ರೀ ಬಂಗಾರು ಅಡಿಗಲಾರ್ ರವರ ಅಂತಿಮ ದರುಶನವನ್ನು ಇಂದು ಮೇಲ್ಮರವತ್ತೂರಿನ ಆದಿಶಕ್ತಿ ಪೀಠದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಪಡೆದರು.
ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ಅಂತಿಮ ದರುಶನವನ್ನು ಪಡೆದರು.