Tuesday, August 16, 2022

Latest Posts

ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಗೆ ಅಭಿನಂದನಾ ಸಮಾರಂಭ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೃಂಗೇರಿ, ಚಿಕ್ಕಮಗಳೂರು ಶಾಖೆಯಲ್ಲಿ ‘ಸಂಸ್ಕೃತ-ಸಂಸ್ಕೃತಿಗೆ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ’ ಎಂಬ ವಿಷಯಕ್ಕೆ ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರಿಗೆ ನಡೆದ ಅಭಿನಂದನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರೀ ಗುಣನಾಥ ಸ್ವಾಮೀಜಿ ಉದ್ಘಾಟಿಸಿದರು.
ಅತಿಥಿಗಳಾಗಿ ಕುವೆಂಪು ವಿವಿ ಕುಲಪತಿಗಳಾದ ಪ್ರೊ.ಬಿ.ಪಿ. ವೀರಭದ್ರಪ್ಪ, ಶೃಂಗೇರಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನಮ್ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಗಣೇಶ್ ಈಶ್ವರ್ ಭಟ್, ಜೆಸಿಬಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸ್ವಾಮಿ,ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಜಿ.ರಾಘವೇಂದ್ರ ಹಾಗೂ ಕಾಲೇಜಿನ ಪ್ರಾಂಶುಪಾಲರು,ಮುಖ್ಯಶಿಕ್ಷಕರು, ಸಿಬ್ಬಂದಿವರ್ಗದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss