ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದಿನಿಂದ ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ಪ್ರಾರಂಭವಾಗಲಿದೆ.

ಈ ರಥಯಾತ್ರೆಯಲ್ಲಿ ಜಗನ್ನಾಥ, ಬಲಭದ್ರ ಹಾಗೂ ಸುಭದ್ರೆಯರ ವಿಗ್ರಹಗಳನ್ನು ಜಗನ್ನಾಥ ದೇಗುಲದಿಂದ ಗುಂಡಿಚಾ ದೇಗುಲದವರೆಗೆ ರಥದಲ್ಲಿ ಕರೆದೊಯ್ಯಲಾಗುತ್ತದೆ. ಗಂಟೆ, ಶಂಖಗಳು ಮತ್ತು ‘ಜೈ ಜಗನ್ನಾಥ’ ಮಂತ್ರಗಳ ನಡುವೆ ರಥಗಳು ಚಲಿಸುಲಿದ್ದು, ಪುರಿಯ ವಾತಾವರಣವು ಅದ್ಭುತ ಮತ್ತು ದೈವಿಕ ಶಕ್ತಿಯಿಂದ ತುಂಬಿರಲಿದೆ.

ಈ ಐತಿಹಾಸಿಕ ಉತ್ಸವವನ್ನು ವೀಕ್ಷಿಸಲು ಈಗಾಗಲೇ ಲಕ್ಷಾಂತರ ಭಕ್ತರು ಪುರಿಯನ್ನು ತಲುಪಿದ್ದಾರೆ. ರಥಯಾತ್ರೆ 9 ದಿನಗಳವರೆಗೆ ಇರಲಿದೆ.

ಪುರಿಯ ರಥಯಾತ್ರೆಯನ್ನು ಧರ್ಮ, ಸಂಸ್ಕೃತಿ ಮತ್ತು ಸಾಮರಸ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಶ್ರೀಕೃಷ್ಣ (ಜಗನ್ನಾಥ), ಅವನ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರಾ ತಮ್ಮ ಚಿಕ್ಕಮ್ಮನ ಮನೆಯಾದ ಗುಂಡಿಚಾ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಭಗವಂತನ ರಥದ ಹಗ್ಗವನ್ನು ಎಳೆಯುವ ಅಥವಾ ಅದನ್ನು ಮುಟ್ಟುವ ಯಾವುದೇ ಭಕ್ತನು ಪುಣ್ಯ ಮತ್ತು ಮೋಕ್ಷವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!