ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನ: ಸಿಎಂ ಸಹಿತ ಗಣ್ಯರ ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂದು ಸಂಜೆ 6 ಗಂಟೆಗೆ ವಿಧಿವಶರಾಗಿದ್ದಾರೆ.
ಸ್ವಾಮೀಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು, ವಿವಿಧ ಮಠದ ಸ್ವಾಮೀಜಿಗಳು ಸಂತಾಪ ಸೂಚಿಸಿದ್ದಾರೆ.

‘ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ.ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು ಎಂದು ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರವಚನಗಳ‌ ಮೂಲಕ ಕೋಟ್ಯಂತರ ಜನರಿಗೆ ಜ್ಞಾನದಾಸೋಹ ನೀಡಿದ ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ. ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಕ್ತರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಬೆಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮೀ ಶ್ರೀಗಳ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!