Saturday, July 2, 2022

Latest Posts

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್ ಹಸ್ತಾಂತರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಚಿತ್ರದುರ್ಗ :

ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ 2 ಟನ್ ಪ್ರಾಣವಾಯು ಆಕ್ಸಿಜನ್‌ಅನ್ನು ಉಚಿತವಾಗಿ ಸೋಮವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ 2 ಟನ್ ಉಚಿತ ಪ್ರಾಣವಾಯು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಈಗಾಗಲೇ 10 ಆಕ್ಸಿಜನ್ ಕಾನ್‌ಸಂಟ್ರೇಟರ್ಸ್‌ಗಳನ್ನು ನೀಡಿದ್ದಾರೆ. ಇಂದು ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್‌ಅನ್ನು ನೀಡಲಾಗಿದ್ದು, ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ರೂಪಾಜನಾರ್ಧನ್, ನಾಗರಾಜ್ ಸಂಗಂ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss