ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ವರ್ಸಟೈಲ್ ನಟಿ ಶೃತಿ ಹರಿಹರನ್‌ಗೆ ಮೀಟೂ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ. ಸೌತ್ ಸ್ಟಾರ್ ಅರ್ಜುನ್ ಸರ್ಜಾ ಮೇಲೆ ಶ್ರುತಿ ಮೀಟೂ ಆರೋಪ ಮಾಡಿದ್ದು, ಇದರ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸೂಕ್ತ ಸಾಕ್ಷಾಧಾರಗಳಲ್ಲಿದ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.
ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ಶ್ರುತಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಮತ್ತೆ ಪೊಲೀಸರು ನೊಟೀಸ್ ನೀಡಿದ್ದಾರೆ. ಸಾಕ್ಷ್ಯಾಧಾರಗಳನ್ನು ನೀಡುವಂತೆ ನೊಟೀಸ್‌ನಲ್ಲಿ ತಿಳಿಸಲಾಗಿದೆ.
ಶ್ರುತಿ ಹಾಗೂ ಸರ್ಜಾ ವಿಸ್ಮಯ ಸಿನಿಮಾದಲ್ಲಿ ನಟಿಸಿದ್ದು, ಸರ್ಜಾ ವಿರುದ್ಧ ಶ್ರುತಿ ಮೀಟೂ ಆರೋಪ ಮಾಡಿದ್ದರು. ಹಲವಾರ ಸಂಘ ಹಾಗೂ ಅಭಿಮಾನಿಗಳು ಸರ್ಜಾರ ಪರ ನಿಂತಿದ್ದರು. ನಂತರ ಅಂಬರೀಷ್ ಮಧ್ಯಸ್ಥಿಕೆಯಲ್ಲಿ ಇವರಿಬ್ಬರ ಮಧ್ಯೆ ಸಂಧಾನ ಮಾಡಲು ಯತ್ನಿಸಿದ್ದರು, ಆದರೆ ಅದು ವಿಫಲವಾಗಿ ಅವರು ಕೋರ್ಟ್ ಮೆಟ್ಟಿಲು ಹತ್ತಿದ್ದರು. ಇದೆಲ್ಲವೂ ನಡೆದು ಆರು ವರ್ಷಗಳಾಗಿದೆ. ಇದೀಗ ನಟಿಗೆ ಸಾಕ್ಷಿ ಒದಗಿಸುವಂತೆ ಸೂಚಿಸಲಾಗಿದೆ.