ಹೊಸದಿಗಂತ ಡಿಜಿಟಲ್ ಡೆಸ್ಕ್:
ರಕ್ಷಾ ಬಂಧನದ ಹಿನ್ನೆಲೆಯಲ್ಲಿ ವಿಶೇಷ ಫೋಟೋಗಳನ್ನು ನಟಿ ಶ್ರುತಿ ಹಂಚಿಕೊಂಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರನ್ನು ಭೇಟಿಯಾಗಿ ಶ್ರುತಿ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ಕುರಿತು ನಟಿ ವಿಶೇಷ ನೋಟ್ ಅನ್ನು ಕೂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮೆಲರಿಗೂ ಒಳ್ಳೆಯದು ಮಾಡಲಿ ಎಂದು ನಟಿ ಬರೆದುಕೊಂಡಿದ್ದಾರೆ.
ಮಗಳು ಗೌರಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನಟಿ ರಾಖಿ ಕಟ್ಟಿ ಆಶೀರ್ವಾದ ಪಡೆದಿದ್ದಾರೆ.
View this post on Instagram