Monday, October 3, 2022

Latest Posts

ಶುಬಮನ್ ಗಿಲ್ ಆಕರ್ಷಕ ಸೆಂಚುರಿ: ಜಿಂಬಾಬ್ವೆಗೆ 290 ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಿಂಬಾಬ್ವೆ ವಿರುದ್ದದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 289 ರನ್ ಸಿಡಿಸಿದೆ.
ಶುಬಮನ್ ಗಿಲ್ ಆಕರ್ಷಕ ಸೆಂಚುರಿ, ಇಶಾನ್ ಕಿಶನ್ ಹಾಫ್ ಸೆಂಚುರಿ ನೆರವಿನಿಂದ ಟೀಂ ಇಂಡಿಯಾ ಅಂತಿಮ ಪಂದ್ಯದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಹಾಗೂ ನಾಯಕ ಕೆಎಲ್ ರಾಹುಲ್ ಮೊದಲ ವಿಕೆಟ್‌ಗೆ 63 ರನ್ ಜೊತೆಯಾಟ ನೀಡಿದರು. ಕೆಎಲ್ ರಾಹುಲ್ 30 ರನ್ ಸಿಡಿಸಿ ಔಟಾದರು. ಇತ್ತ ಧವನ್ 40 ರನ್ ಕಾಣಿಕೆ ನೀಡಿದರು.
ಶುಬಮನ್ ಗಿಲ್ ಹೋರಾಟ ಟೀಂ ಇಂಡಿಯಾದಿಂದ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು. ಇಶಾನ್ ಕಿಶನ್ 61 ಎಸೆತದಲ್ಲಿ6 ಬೌಂಡರಿ ಮೂಲಕ ಹಾಫ್ ಸೆಂಚುರಿ ಸಿಡಿಸಿದರು. 50 ರನ್ ಸಿಡಿಸಿದ ಬೆನ್ನಲ್ಲೇ ಇಶಾನ್ ಕಿಶನ್ ವಿಕೆಟ್ ಪತನಗೊಂಡಿತು. ಗಿಲ್ ಏಕದಿನದಲ್ಲಿ ಚೊಚ್ಚಲ ಶತಕ ಸಿಡಿಸಿದರು. ಆದರೆ ದೀಪಕ್ ಹೂಡ, ಸಂಜು ಸ್ಯಾಮ್ಸನ್ ಸೇರಿದಂತೆ ಇತರರಿಂದ ಉತ್ತಮ ಸಾಥ್ ಸಿಗಲಿಲ್ಲ.
ಹೂಡ 1 ರನ್ ಸಿಡಿಸಿದರೆ, ಸ್ಯಾಮ್ಸನ್ 15 ರನ್ ಸಿಡಿಸಿ ಔಟಾದರು. ಅಕ್ಸರ್ ಪಟೇಲ್ 1 ರನ್ ಸಿಡಿಸಿ ಔಟಾದರು. ಶುಬಮನ್ ಗಿಲ್ 97 ಎಸೆತದಲ್ಲಿ 15 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 130 ರನ್ ಸಿಡಿಸಿ ಔಟಾದರು. ದೀಪಕ್ ಚಹಾರ್ ಅಜೇಯ 1 ರನ್ ಹಾಗೂ ಕುಲ್ದೀಪ್ ಯಾದವ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 289 ರನ್ ಸಿಡಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!