ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್ಡೌನ್ ಆಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶ ಕೇಂದ್ರದಿಂದ ಹಿಂದಿರುಗಿದ್ದಕ್ಕೆ ಸಂತೋಷ ವ್ಯಕ್ತಪಡಿಸಿ ಸ್ವಾಗತಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, “ತಮ್ಮ ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ಇಡೀ ದೇಶದೊಂದಿಗೆ ಸೇರುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಶುಭಾಂಶು ತಮ್ಮ ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವದಿಂದ ಶತಕೋಟಿ ಕನಸುಗಳಿಗೆ ಸ್ಫೂರ್ತಿ ನೀಡಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್ – ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲು” ಎಂದು ಬರೆದಿದ್ದಾರೆ.