ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭೂಮಿಗೆ ಹೊಂದಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.
ಶುಕ್ಲಾ ಅವರು ಮತ್ತೆ ನಡೆಯಲು ಪ್ರಯತ್ನಿಸುತ್ತಿರುವ ಮತ್ತು ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿರುವ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಪುಟ್ಟ ಮಕ್ಕಳು ಆಗ ತಾನೆ ನಡೆಯುವುದನ್ನು ಕಲಿಯುತ್ತಿರುವಂತೆ ಇರುವ ದೃಶ್ಯ ವೀಡಿಯೋದಲ್ಲಿದೆ. ಶುಕ್ಲಾ ಅವರು ನಡೆಯಲು ಇಬ್ಬರು ಸಹಾಯ ಮಾಡುತ್ತಿದ್ದಾರೆ.
View this post on Instagram
ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ. ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್ 25 ರಂದು ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳು ಶುಕ್ಲಾ ಕೂಡ ಒಬ್ಬರು. ಐಎಸ್‌ಎಸ್‌ನಲ್ಲಿ ಸುಮಾರು 18 ದಿನಗಳನ್ನು ಕಳೆದ ನಂತರ ಅವರು ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು.