ರಿಷಬ್ ಪಂತ್ ಆರೋಗ್ಯದ ಕುರಿತು ಮಹತ್ವದ ಮಾಹಿತಿ ನೀಡಿದ ಶ್ಯಾಮ್ ಶರ್ಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟಿಗ ರಿಷಬ್ ಪಂತ್ ಚೇತರಿಕೆಗೆ ಭಾರತೀಯ ಕ್ರಿಕೆಟ್ ಪ್ರೇಮಿ ಗಳು ಪ್ರಾರ್ಥಿಸುತ್ತಿದ್ದು, ಖುದ್ದು ಪ್ರಧಾನಿ ಮೋದಿ ಅವರೇ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.

ಪ್ರಸ್ತುತ, ಪಂತ್ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಪಂತ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿರುವ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯ ಅಧ್ಯಕ್ಷರು ಅವರ ಆರೋಗ್ಯದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಅಪಘಾತವಾದ ಕೂಡಲೇ ಪಂತ್ ಅವರನ್ನು ಮೊದಲು ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಯಿತು. ಪಂತ್ ತಲೆ ಮತ್ತು ಕಾಲಿಗೆ ಗಾಯಗಳಾಗಿದ್ದು, ಅವರು ಅಸ್ಥಿರಜ್ಜು ಮುರಿತಕ್ಕೂ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಿಸಿಸಿಐ ಮತ್ತು ಡಿಡಿಸಿಎ ಕೂಡ ಅವರ ಮೇಲೆ ತೀವ್ರ ನಿಗಾ ಇರಿಸಿದೆ. ಅಲ್ಲದೆ ಪಂತ್ ಅವರ ಅಸ್ಥಿರಜ್ಜುಗೆ ಮಂಡಳಿಯ ವೈದ್ಯಕೀಯ ತಂಡದಿಂದ ಚಿಕಿತ್ಸೆ ನೀಡಲಾಗುವುದು ಎಂದು ಬಿಸಿಸಿಐ ಡೆಹ್ರಾಡೂನ್ ಆಸ್ಪತ್ರೆಗೆ ತಿಳಿಸಿದೆ.

ಡಿಡಿಸಿಎ ತಂಡದ ನಿರ್ದೇಶಕ ಶ್ಯಾಮ್ ಶರ್ಮಾ, ಪಂತ್ ಅವರನ್ನು ಭೇಟಿ ಮಾಡಲು ಬೆಳಗ್ಗೆ ರಾಷ್ಟ್ರ ರಾಜಧಾನಿಯಿಂದ ಹೊರಟಿದ್ದರು. ಈ ವೇಳೆ ಹೆಚ್ಚಿನ ಚಿಕಿತ್ಸೆ ಅವಕಶ್ಯಕವಾಗಿದ್ದರೆ ಅವರನ್ನು ಏರ್‌ಲಿಫ್ಟ್ ಮಾಡಲಿದ್ದೇವೆ ಎಂದು ಹೇಳಿದ್ದರು. ಆದ್ರೆ ಪಂತ್ ಅವರನ್ನು ಭೇಟಿಯಾದ ನಂತರ ಹೇಳಿಕೆ ನೀಡಿರುವ ಶ್ಯಾಮ್, ‘ಪಂತ್ ಅವರ ಆರೋಗ್ಯ ಸ್ಥಿರವಾಗಿದೆ. ಅಲ್ಲದೆ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜೈ ಷಾ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಸದ್ಯಕ್ಕೆ ಪಂತ್​ಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ಪಂತ್ ಹೇಳಿಕೆಯ ಪ್ರಕಾರ ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ’ ಎಂದಿದ್ದಾರೆ.

ಮತ್ತೊಂದೆಡೆ, ಪಂತ್ ಆರೋಗ್ಯದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡ ಡೆಹ್ರಾಡೂನ್ ಎಸ್‌ಎಸ್‌ಪಿ ದಲೀಪ್ ಸಿಂಗ್ ಕುನ್ವಾರ್, ‘ಪಂತ್ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರಿಗೆ ಯಾವುದೇ ಗಂಭೀರ ಗಾಯವಾಗಿಲ್ಲ. ಹೀಗಾಗಿ ಪಂತ್ ಅವರನ್ನು ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ಆದ್ರೆ ಪಂತ್ ಅವರು ಅಸ್ಥಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಮೂರು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಇದು ಟೀಮ್ ಇಂಡಿಯಾ ಹಾಗೂ ಬಿಸಿಸಿಐಗೆ ಹೊಸ ತಲೆನೋವು ತಂದ್ದೊಡ್ಡಿದೆ.

ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್​ಕೀಯಲ್ಲಿರುವ ತನ್ನ ಮನೆಗೆ ರಿಷಭ್ ಪಂತ್ ತನ್ನ ಬೆನ್ಝ್​ ಕಾರ್​​ನಲ್ಲಿ ಬರ್ತಿದ್ರು. ಈ ವೇಳೆ ಪಂತ್​ ಇದ್ದ ಕಾರು ಅಪಘಾತಕ್ಕೀಡಾಗಿತ್ತು. ದೆಹಲಿ-ಡೆಹ್ರಾಡೂನ್ ಹೈವೇನಲ್ಲಿ ರಭಸವಾಗಿ ಬಂದ ಕಾರು ಡಿವೈಡರ್​ಗೆ ಗುದ್ದಿತ್ತು. ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿದ್ದಲ್ಲದೆ, ಕಾರಿನಲ್ಲಿ ಬೆಂಕಿ ಹತ್ತಿಕೊಂಡಿತ್ತು. ಅಷ್ಟರಲ್ಲಾಗಲೇ ಕಾರಿನಿಂದ ಹೊರಬಂದಿದೆ ಪಂತ್, ತಮ್ಮ ಪ್ರಾಣ ಉಳಿಸಿಕೊಂಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!