ಶ್ಯಾಮ್‍ ಪ್ರಸಾದ್ ಮುಖರ್ಜಿ ಜನ್ಮದಿನ: ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪುಷ್ಪನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ಜನಸಂಘದ ಸ್ಥಾಪಕ ಮತ್ತು ಹಿರಿಯ ರಾಜಕಾರಣಿ ಶ್ಯಾಮ್‍ ಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆಯನ್ನು ಇಂದು ಆಚರಿಸಲಾಯಿತು.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಶ್ಯಾಮ್‌ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.‌

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!