SHOCKING | ಭೀಕರ ರಸ್ತೆ ಅಪಘಾತಕ್ಕೆ ‘ಲೇಡಿ ಸಿಂಗಂ’ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ‘ಲೇಡಿ ಸಿಂಗಂ’ ಎಂದೇ ಜನಪ್ರಿಯರಾಗಿದ್ದ ಸಬ್‌ ಇನ್ಸ್‌ಪೆಕ್ಟರ್‌ (ಎಸ್‌ಐ) ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ನಾಗಾಂವ್ ಜಿಲ್ಲೆಯಲ್ಲಿ ಇವರು ವಿವಾದಗಳೊಂದಿಗೆ ಸಾಕಷ್ಟು ಜನಪ್ರಿಯತೆಯನ್ನೂ ಗಳಿಸಿದ್ದರು. ಇದೀಗ ಇವರು ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೊರಿಕೋಲಾಂಗ್ ಪೊಲೀಸ್ ಔಟ್‌ಪೋಸ್ಟ್‌ ಉಸ್ತುವಾರಿ ವಹಿಸಿದ್ದ ಜುನ್ಮೋನಿ ರಾಭಾ ಸೋಮವಾರ ತಡರಾತ್ರಿ ತಮ್ಮ ಖಾಸಗಿ ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಉತ್ತರ ಪ್ರದೇಶದಿಂದ ಬರುತ್ತಿದ್ದ ಕಂಟೈನರ್ ವಾಹನ ಹಾಗು ರಾಭಾ ಅವರ ಕಾರು ಪರಸ್ಪರ ಡಿಕ್ಕಿಯಾಗಿವೆ. ಜಖಲಬಂಧ ಠಾಣೆ ವ್ಯಾಪ್ತಿಯ ಸರುಭುಗಿಯ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದರು. ಜುನ್ಮೋನಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರನ್ನು ಉಳಿಸಿಕೊಳ್ಳಲು ಸಾ‍ಧ್ಯವಾಗಿಲ್ಲ. ಸಿವಿಲ್ ಡ್ರೆಸ್​ನಲ್ಲಿದ್ದ ರಾಭಾ ಆ ಸಮಯದಲ್ಲಿ ಒಬ್ಬರೇ ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಎಸ್ಪಿ ಹೇಳಿದ್ದಾರೆ.

ಕುಟುಂಬ ಸದಸ್ಯರು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ. ನಾಗಾಂವ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!