Wednesday, July 6, 2022

Latest Posts

6 ಕೋಟಿ ರೂ. ವೆಚ್ಚದಲ್ಲಿ ಸಿದ್ದಗಂಗಾ ಸ್ವಾಮೀಜಿ ಹೆಸರಿನ ಆಡಿಟೋರಿಯಂ ನಿರ್ಮಾಣ: ಶಾಸಕ ಎ. ಮಂಜುನಾಥ್

ಹೊಸದಿಗಂತ ವರದಿ, ರಾಮನಗರ:

ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ದಗಂಗಾ ಮಠಾಧೀಶರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ಸುಸಜ್ಜಿತ ಆಡಿಟೋರಿಯಂ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎ. ಮಂಜುನಾಥ್ ತಿಳಿಸಿದರು.

ಶಿವಕುಮಾರ ಸ್ವಾಮೀಜಿ ಸಮುದಾಯ ಭವನದ ಉದ್ಘಾಟನೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಗಡಿ ‘ಪಟ್ಟಣದ ಡ್ಯೂಮ್ ಲೈಟ್ ಸರ್ಕಲ್ ಬಳಿ 6 ಕೋಟಿ ರೂ. ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಿಸಲಾಗುತ್ತಿದೆ ಎಂದರು.

ಈ ವೇಳೆ ಸಮುದಾಯ ಭವನದ ನಸದ್ಬಳಕೆಗೆ ಶಾಸಕರ ಭವನದಿಂದ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದರು.

ಸಿದ್ದಗಂಗಾಮಠದ ಅಧ್ಯಕ್ಷ ಸಿದ್ದಲಿಂಗಸ್ವಾಮೀಜಿ ಮಾತನಾಡಿ, 50 ವರ್ಷಗಳ ಹಿಂದೆ ಸಿದ್ದಗಂಗಾ ಶ್ರೀಗಳು ಗುಡೇಮಾರನಹಳ್ಳಿ, ಸೋಲೂರು, ನಾರಸಂದ್ರ ಪ್ರದೇಶಗಳಲ್ಲಿ ಪ್ರೌಢಶಾಲೆ ಪ್ರಾರಂಭಿಸಿರುವುದು ಸಂತಸದ ವಿಷಯ. ಈ ಶಾಲೆಯಿಂದ ಗ್ರಾಮೀಣ ಭಾಗದ ಬಾಲಕಿಯರಿಗೆ ವಿದ್ಯೆ ದೊರಕಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss