ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನ ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ) ನೋಟಿಸ್ ನೀಡಿದ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ.
ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೊಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ನೀಡಿದ್ದ ನೋಟಿಸ್ ಅನ್ನು ಸರ್ಕಾರ ವಾಪಸ್ ಪಡೆದಿದೆ.
ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಇದು ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್. ಕೆಐಡಿಬಿಯ ಒಂದು ಕೆರೆ ಇದೆ. ಆ ಕೆರೆಯಿಂದ ನೀರು ತೆಗೆದುಕೊಂಡಿದ್ದಾರೆ. ನೀರು ಬಳಸಿದ್ದರೂ ಅದು ತಪ್ಪಲ್ಲ. ನೀರೇ ಬಳಸದೆ ನೋಟಿಸ್ ಕೊಟ್ಟಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ತುಮಕೂರಿನ ಸಿದ್ದಗಂಗಾ ಮಠದ ಬಗ್ಗೆ ನಮಗೆಲ್ಲರಿಗೂ ಗೊತ್ತು. ಈಗಾಗಲೇ ನಾನು ಕೆಐಎಡಿಬಿ ಸಿಇಒಗೆ ಹೇಳಿದ್ದೇನೆ. ಸಿದ್ದಗಂಗಾ ಮಠದ ಸ್ವಾಮೀಜಿ ಜೊತೆಗೂ ಮಾತನಾಡುತ್ತೇನೆ. ಕೆಐಎಡಿಬಿ ವ್ಯಾಪ್ತಿಗೆ ಬರುವ ಕೆರೆ ನೀರನ್ನು ಬಳಸಿಕೊಂಡರೂ ಪರವಾಗಿಲ್ಲ ಎಂದು ಅವರು ಹೇಳಿದ್ದಾರೆ.