April 3, 2026
Friday, April 3, 2026
spot_img

ಸಿದ್ದಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ: ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ಇಡೀ ತುಮಕೂರು ಜಿಲ್ಲೆಯಲ್ಲಿ ಹಬ್ಬದ ವಾತಾವರಣವಿದೆ.

ಡಾ ಶಿವಕುಮಾರ ಸ್ವಾಮಿಗಳ ಜಯಂತಿ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಸ್ಮರಿಸಿದ್ದಾರೆ. ಕನ್ನಡದಲ್ಲಿ ಎಕ್ಸ್ ಸಂದೇಶ ನೀಡಿರುವ ಪ್ರಧಾನ ಮಂತ್ರಿಗಳು, ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ ಎಂದರು.

ಇಂದು ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆ ಸಾಯಂಕಾಲವೇ ಬೆಂಗಳೂರಿಗೆ ರಾಷ್ಟ್ರಪತಿಗಳು ಆಗಮಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !