ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಭಾವಿ ಮಠದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ಬೆಳಗಾವಿಯ ಗೋಕಾಕ್ನ ಪ್ರಸಿದ್ಧವಾದ ಅರಭಾವಿ ಮಠದಲ್ಲಿಯೇ ಸ್ವಾಮೀಜಿಗೆ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ.
ಸ್ವಾಮೀಜಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಭಕ್ತಾದಿಗಳು ಕಂಬನಿ ಮಿಡಿದಿದ್ದಾರೆ. ಮಠಕ್ಕೆ ಬೇರೆ ಬೇರೆ ರಾಜ್ಯದ ಭಕ್ತರೂ ಇದ್ದು, ಸ್ವಾಮೀಜಿ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.