ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅಂತ್ಯಕ್ರಿಯೆ: ರಾಜ್ಯ ಸರಕಾರ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನಿಂದ ನಿಧನರಾದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ( 67) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಕೂಡ ಆದೇಶ ನೀಡಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಕನಿಷ್ಠ ಪೊಲೀಸ್​ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್​ ಮಾರ್ಗಸೂಚಿ ಪಾಲಿಸಿ ಮೃತರ ಅಂತ್ಯಕ್ರಿಯೆ ನೆರೆವೇರಿಸುವಂತೆ ಸರ್ಕಾರ ಆದೇಶಿಸಿದೆ.
ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಜ್ಞಾನಭಾರತಿ ಆವರಣದ ಕಲಾಗ್ರಾಮದಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಸಿದ್ದಲಿಂಗಯ್ಯ ಅವರ ಗುರುಗಳಾಗಿದ್ದ ರಾಷ್ಟ್ರಕವಿ ಜಿಎಸ್ ಶಿವರುದ್ರಪ್ಪ ಅವರ ಸಮಾಧಿ ಸಮೀಪದಲ್ಲೇ ಅವರ ಅಂತ್ಯಕ್ರಿಯೆಗೆ ನಿರ್ಧರಿಸಲಾಗಿದೆ. ನಾಳೆ ಅಂತ್ಯ ಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಗೂ ಮುನ್ನ ನಾಗರಬಾವಿಯಲ್ಲಿನ ಅಂಬೇಡ್ಕರ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss