spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, January 17, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ತಮ್ಮ ಸ್ಥಾನಮಾನದ ಬಗ್ಗೆ ಅರಿವಿಟ್ಟುಕೊಂಡು ಮಾತನಾಡಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

- Advertisement -Nitte

ಹೊಸ ದಿಗಂತ ವರದಿ, ದಾವಣಗೆರೆ:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ ನಾಯಕ ಎಂಬುದನ್ನೇ ಮರೆತು, ಮತ್ತೊಬ್ಬರ ಬಗ್ಗೆ ತೀರಾ ಹಗುರವಾಗಿ ಮಾತನಾಡುತ್ತಿದ್ದು, ಇಂತಹ ಸೊಕ್ಕಿನ, ಧಿಮಾಕಿನ ಮಾತಿಗೆ ಯಾರೂ ಬೆಲೆ ಕೊಡುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರಿಹಾಯ್ದಿದ್ದಾರೆ.
ತಾಲೂಕಿನ ಆನಗೋಡು ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವೊಬ್ಬ ವಿಪಕ್ಷ ನಾಯಕ ಅನ್ನೋದನ್ನೇ ಮರೆತು ಸಿದ್ದರಾಮಯ್ಯ ಸೊಕ್ಕು, ಧಿಮಾಕಿನ ಮಾತುಗಳನ್ನಾಡುತ್ತಿದ್ದಾರೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಂದ ನಂತರ ಸಿದ್ದರಾಮಯ್ಯಗೆ ಗೊತ್ತಾಗುತ್ತದೆ. ಇನ್ನಾದರೂ ಮತ್ತೊಬ್ಬರ ಬಗ್ಗೆ ಗೌರವಯುತವಾಗಿ
ಮಾತನಾಡಲಿ. ಒಬ್ಬ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ತಮ್ಮ ಸ್ಥಾನಮಾನದ ಬಗ್ಗೆ ಅರಿವಿಟ್ಟುಕೊಂಡು ಮಾತನಾಡಬೇಕು ಎಂದು ಸಲಹೆ ನೀಡಿದರು.
ಮತದಾರರು ಜಾಗೃತರಾಗಿದ್ದಾರೆ. ಯಾವುದು ಸರಿ, ತಪ್ಪು ಎಂಬುದು ಮತದಾರರಿಗೂ ಗೊತ್ತಿದೆ. ಮೈಸೂರಿನಲ್ಲೇ ಸೋತಿರುವಂತಹ ಸಿದ್ದರಾಮಯ್ಯ ಇಷ್ಟೊಂದು ಹಗುರವಾಗಿ ಬೇರೆಯವರ ಬಗ್ಗೆ ಮಾತನಾಡುವುದು ಶೋಭೆಯಲ್ಲ ಎಂದರಲ್ಲದೆ, ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಯಾರನ್ನು ಸಚಿವರಾಗಿ ಮಾಡಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಭೇಟಿಗೂ, ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಸಂಬಂಧ ಇಲ್ಲ. ನಾನು ಬಹಿರಂಗವಾಗಿಯೇ ಜೆಡಿಎಸ್ ಪಕ್ಷದ ಬೆಂಬಲ ಕೇಳಿದ್ದೇನೆ. ಜೆಡಿಎಸ್ ಸ್ಪರ್ಧಿಸದ ಕಡೆ, ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. ಜೆಡಿಎಸ್ ತಾನು ಸ್ಪರ್ಧಿಸದ
ಕ್ಷೇತ್ರಗಳಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಅವರು ನುಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಕೆ.ಎಸ್.ನವೀನ್ ಸೇರಿದಂತೆ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆಗ ವಿಧಾನಸಭೆಯಲ್ಲಿ ಬಹುಮತ ಹೊಂದಿರುವ ನಾವು ವಿಧಾನ ಪರಿಷತ್‌ನಲ್ಲಿ ಯಾರನ್ನೂ ಅವಲಂಬಿಸಬೇಕಾಗುವುದಿಲ್ಲ. ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ 2 ಸಲ ಸೋತಿರುವ ಬಗ್ಗೆ ಮತದಾರರಿಗೂ ಅನುಕಂಪವಿದ್ದು,
ನವೀನ್‌ಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ.
ಬೆಂಗಳೂರಿನಿಂದ ಹಣ ತೆಗೆದುಕೊಂಡು ಬಂದಿರುವ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಹಣ ಕಳೆದುಕೊಂಡು ಮತ್ತೆ ವಾಪಾಸ್ಸು ಬೆಂಗಳೂರಿಗೆ ಹೋಗುತ್ತಾರೆ ಎಂದು ಅವರು ಭವಿಷ್ಯ ನುಡಿದರು.
ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಭೈರತಿ, ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಎನ್.ಲಿಂಗಣ್ಣ, ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಎಸ್.ಎಂ.ವೀರೇಶ ಹನಗವಾಡಿ,
ಬಿ.ಎಸ್.ಜಗದೀಶ, ಶೈಲಜಾ ಬಸವರಾಜ ಇತರರು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss