Wednesday, February 28, 2024

ದೇಶದಲ್ಲಿ ಅಶಾಂತಿ, ಬೆಲೆ ಏರಿಕೆ, ಬಡತನ ಹೆಚ್ಚಾಗಿದ್ದರೆ ಅದಕ್ಕೆ ಬಿಜೆಪಿ ಕಾರಣ: ಸಿದ್ದರಾಮಯ್ಯ ಆರೋಪ

ಹೊಸದಿಗಂತ ವರದಿ, ಮೈಸೂರು:

ದೇಶದಲ್ಲಿ ಅಶಾಂತಿ, ಬೆಲೆ ಏರಿಕೆ, ಬಡತನ ಹೆಚ್ಚಾಗಿದ್ದರೆ, ಅಲ್ಪಸಂಖ್ಯಾತರು ಕಷ್ಟದಲ್ಲಿ ಇದ್ದರೆ ಅದಕ್ಕೆ ಬಿಜೆಪಿ ಕಾರಣ ಎಂದು ವಿಪಕ್ಷನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಬುಧವಾರ ಮೈಸೂರು ನಗರದ ಇಂದಿರಾಗಾAಧಿ ಭವನದಲ್ಲಿ ಮೈಸೂರು ನಗರ,ಗ್ರಾಮಾಂತರ, ಚಾಮರಾಜನಗರ, ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ÷್ಯ ತಂದು ಕೊಟ್ಟ ಪಕ್ಷ.ಅಂತಾರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾಂಗ್ರೆಸ್ ಕೊಡುಗೆ ಕಾರಣ. ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಯುಗ ಸೇರಿದಂತೆ ಸರ್ವತೋಮುಖ ಅಭಿವೃದ್ಧಿ ಕಾಣಲು ಕಾಂಗ್ರೆಸ್ ಕಾರಣ ಹೊರತು ಬಿಜೆಪಿಯಲ್ಲ. ಬಿಜೆಪಿಯ ನಾಯಕರು ಸ್ವಾತಂತ್ರ÷್ಯಕ್ಕಾಗಿ ಹೋರಾಟ ಮಾಡಿದರವಲ್ಲ ಎಂದರು.
ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿದರೆ ಶ್ರೀಲಂಕಾ ಸ್ಥಿತಿ ನಿರ್ಮಾಣವಾಗಲಿದ್ದು, ಭ್ರಷ್ಟಾಚಾರದ ಆಡಳಿತ, ರೈತವಿರೋಧಿ, ಜನವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ಜನರು ಮುಂದಾಗಬೇಕು ಎಂದು ಕರೆ ನೀಡಿದರು. ಸಮಾಜವನ್ನು ಒಡೆದು ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಹಾಳಾಗಿದೆ. ಬಿಜೆಪಿಯವರು ಅಧಿಕಾರದಲ್ಲಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಶ್ರೀಲಂಕಾದಲ್ಲಿ ಎದುರಿಸುತ್ತಿರುವ ಪರಿಸ್ಥಿತಿ ನಿರ್ಮಾಣವಾಗಲು ಕಾರಣ. ಅದುಆಗಬಾರದೆಂದರೆ ಬೇಗನೆ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ತೊಲಗಬೇಕು ಎಂದು ಹೇಳಿದರು. ದೇಶದ ಜನರಿಗೆ ಸುಳ್ಳು ಹೇಳಿ ಕೇಂದ್ರದಲ್ಲಿ ಮೋದಿ ಅಧಿಕಾರಕ್ಕೆ ಬಂದರು.ಬಡತನ,ನಿರುದ್ಯೋಗ ಬೆಲೆ ಏರಿಕೆ,ರೈತರು ಅನೇಕ ಸಮಸ್ಯೆಗಳನ್ನು ಎದುರಿಸಲು ಬಿಜೆಪಿ ಮತ್ತು ಮೋದಿ ಅವರ ಆಡಳಿತ ಕಾರಣವಾಗಿದೆ. ಡಾ.ಮನಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದಾಗ ಗ್ಯಾಸ್ ಸಿಲಿಂಡರ್ ಬೆಲೆ 400 ರೂ.ಇತ್ತಾದರೂ ಈಗ ಒಂದು ಸಾವಿರ ರೂಪಾಯಿ ಆಗಿದೆ. ದೇಶದ ಆಗುಹೋಗುಗಳ ಬಗ್ಗೆ ಮತದಾರರಿಗೆ ತಿಳಿಸಬೇಕು ಎಂದರು.
ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಆಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಪಿಎಸ್‌ಐ ನೇಮಕಾತಿ,ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣ ಸೇರಿ ಇನ್ನಿತರ ಭ್ರಷ್ಟಾಚಾರಗಳು ನಡೆದಿರುವ ಹಿನ್ನೆಲೆಯಲ್ಲಿ ಪದವೀಧರರು ಗಮನಿಸಬೇಕು ಎಂದರು. ಈ ಬಾರಿಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ ಮುಂಚಿತವಾಗಿ ಅಭ್ಯರ್ಥಿಯಾಗಿ ಮಧು ಜಿ. ಮಾದೇಗೌಡ ಅವರ ಹೆಸರನ್ನು ಪ್ರಕಟಿಸಲಾಯಿತು. ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಅವರು ಈಗ ಮೇಲ್ಮನೆಗೆ ಸ್ಪರ್ಧೆ ಮಾಡಿದ್ದಾರೆ. ಅವರನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.
ಅಭ್ಯರ್ಥಿ ಮಧು ಜಿ.ಮಾದೇಗೌಡ ಮಾತನಾಡಿ, ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದ ಜನರು ಬೇಸತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದನ್ನು ಪದವೀಧರರು ಗಮನಿಸಿದ್ದಾರೆ. ಇವೆಲ್ಲವೂ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕರಾದ ಎಚ್.ಪಿ.ಮಂಜುನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಆರ್.ನರೇಂದ್ರ, ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ದಿನೇಶ್ ಗೂಳಿಗೌಡ, ಮಾಜಿ ಸಂಸದರಾದ ಎ.ಸಿದ್ದರಾಜು, ಕಾಗಲವಾಡಿ ಎಂ.ಶಿವಣ್ಣ,ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ,ಎಂ.ಎಸ್.ಆತ್ಮಾನAದ, ಎನ್.ಚೆಲುವರಾಯಸ್ವಾಮಿ, ಮಾಜಿ ಶಾಸಕರಾದ ಬನ್ನೂರು ಕೃಷ್ಣಪ್ಪ, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಕೆ.ವೆಂಕಟೇಶ್, ಕೆ.ಚಂದ್ರಶೇಖರ್, ಎ.ಆರ್.ಕೃಷ್ಣಮೂರ್ತಿ,ಎಸ್.ಜಯಣ್ಣ, ಮೊದಲಾದವರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!