ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಾಜಾಧ್ವನಿ ಯಾತ್ರೆ ಕೈಗೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಏಕಾಏಕಿ ಸುದ್ದಿಗೋಷ್ಠಿ ಕರೆದಿದ್ದಾರೆ.
ಚುನಾವಣೆ ಸಮೀಪದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇರಲಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಷಯ ಪ್ರಸ್ತಾಪವಾಗುವ ಸಾಧ್ಯತೆ ಇದೆ.