Friday, February 23, 2024

ಮೇಕೆದಾಟು ಪಾದಯಾತ್ರೆಯಿಂದ ಅರ್ಧದಲ್ಲೇ ಬೆಂಗಳೂರಿಗೆ ಬಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಪಾದಯಾತ್ರೆಯಿಂದ ದಿಡೀರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ನಗರಕ್ಕೆ ಹಿಂದಿರುಗಿದ್ದಾರೆ.
ಈ ಮೊದಲು ಭಾನುವಾರ ಆರಂಭವಾದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಮೊದಲ ದಿನವೇ ಮಧ್ಯಾಹ್ನದ ಹೊತ್ತಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿಗೆ ವಾಪಸಾಗಿದ್ದರು. ಇದೀಗಮಧ್ಯಾಹ್ನದವರೆಗೂ ತಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್​ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿ , ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸಾಗಿದ್ದಾರೆ.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕೋರ್ಟ್​ನಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಹಾಗೂ ಕೋವಿಡ್ ನಿಯಮಾವಳಿಗಳ ಉಲ್ಲಂಘನೆ ಸಂಬಂಧ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಜ.14ರಂದು ಹೈಕೋರ್ಟ್ ನೀಡುವ ತೀರ್ಪನ್ನು ಪಕ್ಷ ಗೌರವಿಸಲಿದೆ ಎಂದರು.
ಇನ್ನುನಾಳೆಯ ಪಾದಯಾತ್ರೆಯಲ್ಲಿ ತಾವು ಪಾಲ್ಗೊಳ್ಳುತ್ತಿರುವುದಾಗಿ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!