ಸಿದ್ದರಾಮಯ್ಯರವರಿಗೆ ಬಡವರ ಕುರಿತು ಹೆಚ್ಚು ಕಾಳಜಿ: ಸಚಿವ ಜಮೀರ್

ಹೊಸದಿಗಂತ ವರದಿ,ಮೈಸೂರು:

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಬಡವರ ಬಗ್ಗೆ ಹೆಚ್ಚು ಕಾಳಜಿ ಇರುವುದರಿಂದ ಪ್ರತಿ ಮನೆಗೆ 5 ಲಕ್ಷ ಸಬ್ಸಿಡಿಯಂತೆ ಒಟ್ಟು 8500 ಕೋಟಿ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ತಿಳಿಸಿದರು.

ಗುರುವಾರ ವರುಣ ಕ್ಷೇತ್ರದ ಲಲಿತಾದ್ರಿಪುರದಲ್ಲಿದ್ದ ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಜಿಲ್ಲಾಡಳಿತ ಮೈಸೂರು ಜಿಲ್ಲೆ, ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1440 ಗುಂಪು ಮನೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಿಗೆ ಏಕೇ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯನವರು ನುಡಿದಂತೆ ನಡೆಯುವ ಮುಖ್ಯಮಂತ್ರಿ, ಬಡವರ ಪರವಾಗಿರುವ ಮುಖ್ಯಮಂತ್ರಿಯಾಗಿದ್ದರಿoದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ವರುಣ ಕ್ಷೇತ್ರದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಮ್ಮ ಕಾಂಗ್ರೆಸ್ ಸರ್ಕಾರವಿದ್ದಾಗ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ಬಡವರಿಗಾಗಿ ಕಟ್ಟಿದ್ದೇವೆ. ಈಗ ಕೃಷ್ಣರಾಜ ಕ್ಷೇತ್ರದ ಫಲಾನುಭವಿಗಳಿಗೆ 940 ಮನೆ ವರುಣಾ ಕ್ಷೇತ್ರದ ಫಲಾನುಭವಿಗಳಿಗೆ 500 ಮನೆಗಳನ್ನು ಕಟ್ಟಿಕೊಡಲಾಗುವುದು ನಮ್ಮ ಸರ್ಕಾರ ಬಂದ ಮೇಲೆ ವರುಣಾ ಕ್ಷೇತ್ರಕ್ಕೆ ವಸತಿ ಸಚಿವರು 3 ಸಾವಿರ ಮನೆ ಮಂಜೂರು ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ದೀನ ದಲಿತರ ಪರವಿರುವ ಸರ್ಕಾರವಾಗಿದೆ. ದೇಶದಲ್ಲಿ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಶ್ರೀಮಂತರಾಗುತ್ತಲೇ ಇದ್ದಾರೆ. ಶೇ.1% ರಷ್ಟು ಜನರಲ್ಲಿ ಶೇ. 50% ಸಂಪತ್ತು ಸೇರಿಕೊಂಡಿದೆ. ಇದರಿಂದ ದೇಶದಲ್ಲಿ ಸಮಾನತೆ ಬರಲು ಸಾಧ್ಯವಿಲ್ಲ ಎಂದರು.

ಸಮಾರoಭದಲ್ಲಿ ಕೆ.ಆರ್. ಕ್ಷೇತ್ರದ ಶಾಸಕ, ಶ್ರೀವತ್ಸ, ಮೂಡಾ ಅಧ್ಯಕ್ಷ ಕೆ.ಮರೀಗೌಡ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಮುಖಂಡರಾದ ಮಂಜುಳಾ ಮಂಜುನಾಥ್, ರಮೇಶ್ ಮುದ್ದೇಗೌಡ, ಸಕ್ಕಳ್ಳಿ ಬಸಸರಾಜು, ಉತ್ತನಹಳ್ಳಿ ಶಿವಣ್ಣ, ನಗರಪಾಲಿಕೆ ಆಯುಕ್ತೆ ಡಾ. ಎಂ.ಎನ್. ಮಧು, ಉಪ ಆಯುಕ್ತೆ ಕುಸುಮಾ ಕುಮಾರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ವಿಜಯ್, ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್ ಕುಮಾರ್, ನಾಗರಾಜು ಇದ್ದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!